ಬೆಂಗಳೂರು:ರೈಲಿಗೆ ತಲೆಕೊಟ್ಟು ಯುವಕ, ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಮೃತರನ್ನು ಚೈತನ್ಯ (19) ಮತ್ತು ಸಿರೀಶ್ (20) ಎಂದು ಗುರುತಿಸಲಾಗಿದೆ.
ಬೆಂಗಳೂರು: ರೈಲಿಗೆ ತಲೆ ಕೊಟ್ಟು ಯುವಕ, ಯುವತಿ ಆತ್ಮಹತ್ಯೆ - ರೈಲಿಗೆ ತಲೆ ಕೊಟ್ಟು ಯುವಕ - ಯುವತಿ ಸಾವು
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ಮತ್ತು ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಬೆಂಗಳೂರು
ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್.ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಮೂಲತಃ ಎಲ್ಲಿಯವರು ಹಾಗೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ಯುವತಿ ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ವಿಲೇವಾರಿಗೆ ಹೊರಟಾಗ ಸಿಕ್ಕಿಬಿದ್ದ ಭಗ್ನಪ್ರೇಮಿ!