ಬೆಂಗಳೂರು: ವಾಲಿಬಾಲ್ ಆಡುವಾಗ ಸ್ನೇಹಿತರ ಜೊತೆ ಗಲಾಟೆ ನಡೆದು ಅವರು ಹೊಡೆದರು ಎಂಬ ಕಾರಣಕ್ಕೆ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ.
ಸ್ನೇಹಿತರು ಹೊಡೆದಿದ್ದಕ್ಕೆ ನೊಂದ ಯುವಕ ಆತ್ಮಹತ್ಯೆಗೆ ಶರಣು - undefined
ವಾಲಿಬಾಲ್ ಆಡವಾಡಲು ಹೋದಾಗ ಸ್ನೇಹಿತರ ನಡೆವೆ ಜಗಳವಾಗಿದೆ. ಈ ಸಂದರ್ಭದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
![ಸ್ನೇಹಿತರು ಹೊಡೆದಿದ್ದಕ್ಕೆ ನೊಂದ ಯುವಕ ಆತ್ಮಹತ್ಯೆಗೆ ಶರಣು](https://etvbharatimages.akamaized.net/etvbharat/images/768-512-2858803-229-121a94a4-3208-473b-b78b-69442e0e7a2b.jpg)
ಆತ್ಮಹತ್ಯೆಗೆ ಶರಣಾದ ಯುವಕ
ಆತ್ಮಹತ್ಯೆಗೆ ಶರಣಾದ ಯುವಕ
ಹೊಸಕೋಟೆ ತಾಲೂಕಿನ ನೆಲವಾಗಿಲು ಗ್ರಾಮದ ಮುರಳಿ (21) ನೇಣಿಗೆ ಶರಣಾದ ಯುವಕ. ಈತ ಕೆ.ಸತ್ಯವಾರ ಗ್ರಾಮದ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ಸಂಜೆ ವಾಲಿಬಾಲ್ ಆಡುವ ವೇಳೆ ಸ್ನೇಹಿತರು ಬೈದಿದ್ದಾರೆ. ಈ ವಿಚಾರದಿಂದ ಮನನೊಂದ ಮುರಳಿ ಗ್ರಾಮದ ಹೊರಭಾಗದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿ ದೊರೆತಿದ್ದು, ಕೆಲ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ನಂದಗುಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.