ಬೆಂಗಳೂರು:ಕೊರೊನಾ ಅಟ್ಟಹಾಸ ಹಿನ್ನೆಲೆ ಕೆಲಸ ಸಿಗದಿದ್ದಕ್ಕೆ ಜುಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಕೊರೊನಾ ಎಫೆಕ್ಟ್, ಕೆಲಸ ಸಿಗದಿದ್ದಕ್ಕೆ ಜೀವವನ್ನೇ ಕಳೆದುಕೊಂಡ ಪದವೀಧರ
ಕೆಲ ತಿಂಗಳ ಹಿಂದೆ ದಾಂಡೇಲಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
23 ವರ್ಷದ ಶಶಾಂಕ್ ಆತ್ಮಹತ್ಯೆ ಶರಣಾದ ಯುವಕ. ಈತ ಕೆಲ ತಿಂಗಳ ಹಿಂದೆ ದಾಂಡೇಲಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ. ಬಿಕಾಂ ಪದವೀಧರನಾಗಿದ್ದ ಶಶಾಂಕ್ ಹಲವು ಕಂಪೆನಿಗಳಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರೂ ಕೆಲಸ ಮರಿಚೀಕೆಯಾಗಿತ್ತು.
ಜಯನಗರದಲ್ಲಿ ಸ್ನೇಹಿತರೊಂದಿಗೆ ಮನೆಯೊಂದರಲ್ಲಿ ಉಳಿದುಕೊಂಡಿದ್ದ. ರೂಮಿಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ಹಗ್ಗದಿಂದ ನೇಣುಬಿಗಿದುಕೊಂಡಿದ್ದಾನೆ. ಈ ಸಂಬಂಧ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.