ಬೆಂಗಳೂರು:ಮದ್ಯದ ಅಮಲಿನಲ್ಲಿ ತೆಂಗಿನ ಮರ ಏರಿದ್ಧ ಕೂಲಿ ಕಾರ್ಮಿಕನೊಬ್ಬ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಪಶ್ಚಿಮ ಬಂಗಾಳ ಮೂಲದ ಗೌತಮ್ (26)ಮೃತ ಕಾರ್ಮಿಕ. ಕೂಲಿ ಕೆಲಸ ಮಾಡಿಕೊಂಡಿದ್ದ ಗೌತಮ್, ಕಾಮಾಕ್ಷಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಗುಜರಿ ಗೋದಾಮಿನಲ್ಲಿ ಕಳೆದ ಆರು ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮೈಸೂರು ರಸ್ತೆಯ ಬಿಎಂಟಿಸಿ ಡಿಪೋ 12ರ ಬಳಿ ಭಾನುವಾರ ರಾತ್ರಿ ತೆಂಗಿನ ಮರ ಹತ್ತಿ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕೆಂಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಹಾಸನ: ಕುಡಿಯಲು ಹಣ ಕೊಡಲಿಲ್ಲ ಎಂದು ಅಜ್ಜಿಯನ್ನೇ ಕೊಂದ ಮೊಮ್ಮಗ