ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಕಳೆದ ಒಂದೂವರೆ ತಿಂಗಳಿನಿಂದ ಪೂರ್ವತಯಾರಿಯನ್ನು ರಾಜ್ಯಾದ್ಯಂತ ಮಾಡಿಕೊಳ್ಳಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂಥ್ ಈಟಿವಿ ಭಾರತ್‌ಗೆ ತಿಳಿಸಿದ್ದಾರೆ.
ಚುನಾವಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದ ಹಾಗೆ ಪೊಲೀಸ್ ಇಲಾಖೆ ಕ್ರಮವನ್ನು ಕೈಗೊಂಡಿದೆ. ಮತದಾನ ಪೂರ್ವ ಚುನಾವಣಾ ಪ್ರಕ್ರಿಯೆಗಳು ಶಾಂತಿಯುತವಾಗಿವೆ. ಕೆಲವೊಂದು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಯಾವುದೇ ರೀತಿಯ ಗಂಭೀರ ಸ್ವರೂಪದ ಘಟನೆಗಳು ಸಂಭವಿಸಿಲ್ಲ ಎಂದರು.
ಕಮಲ್ ಪಂಥ್ ಜೊತೆ ಚಿಟ್‌ಚಾಟ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅವರಿಗೆ ನೀಡಿರುವ ಭದ್ರತೆಯ ಬಗ್ಗೆ ಮಾಹಿತಿ ನೀಡಿದ ಅವರು, ಎರಡು ಪಿಎಸ್ಐ, ಇನ್ಸ್ಪೆಕ್ಟರ್, ಮೂರು ಜನ ಸಿಬ್ಬಂದಿಯನ್ನು ಅವರ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಯುವ ಮತದಾರರಿಗೆ ಮತ ಹಾಕುವಂತೆ ಕರೆ ಕೊಟ್ಟ ಕಮಲ್ ಪಂತ್, ಚುನಾವಣೆಯಲ್ಲಿ ಮತದಾನ ಎನ್ನುವುದು ಒತ್ತಾಯದ ವಿಚಾರವಾಗಬಾರದು. ಮತದಾನವನ್ನು ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಹಬ್ಬದ ರೀತಿಯಲ್ಲಿ ಸಂಭ್ರಮಿಸಬೇಕು ಎಂದು ಅಭಿಪ್ರಾಯಪಟ್ಟರು.