ದೊಡ್ಡಬಳ್ಳಾಪುರ:ಮೊಬೈಲ್ನಲ್ಲಿ ಹೆಚ್ಚು ಮಾತನಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಸ್ನೇಹಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಯುವತಿ ಹೆಚ್ಚಾಗಿ ಫೋನ್ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಆಕೆಯ ತಾಯಿ ಮೊಬೈಲ್ನಲ್ಲಿ ಹೆಚ್ಚು ಮಾತನಾಡಬೇಡ ಎಂದು ಬುದ್ಧಿವಾದ ಹೇಳಿ ಗದರಿಸಿದ್ದರು.