ಮಹದೇವಪುರ(ಬೆಂಗಳೂರು):ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಯುವತಿ ಸಾವನ್ನಪ್ಪಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಿನ್ನೆ ನಡೆದಿದೆ. 23 ವರ್ಷದ ಅಕಿಲ ಮೃತಪಟ್ಟಿರುವ ಯುವತಿ. ಇವರು ಕೆಲಸ ಮುಗಿಸಿ ಮನೆಗೆ ಹೊರಡುವಾಗ ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಬಿದ್ದಿದೆ. ಈ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಹಿಡಿದಿದ್ದು, ಮೈಮೇಲೆ ವಿದ್ಯುತ್ ಹರಿದಿದೆ ಎಂದು ತಿಳಿದುಬಂದಿದೆ.
ಸೋಮವಾರ ರಾತ್ರಿ 9 ಗಂಟೆ ಸಮಯದಲ್ಲಿ ವೈಟ್ ಫೀಲ್ಡ್ -ಮಾರತಹಳ್ಳಿ ಮುಖ್ಯರಸ್ತೆಯ ಸಿದ್ದಾಪುರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಕಾರಣ ರಸ್ತೆಯಲ್ಲಿ ನೀರು ನಿಂತಿತ್ತು. ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ, ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದರು.