ಬೆಂಗಳೂರು: ವೀಕೆಂಡ್ ಮಸ್ತಿಯಲ್ಲಿದ್ದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಸಿಲಿಕಾನ್ ಸಿಟಿಯಲ್ಲಿ ಯುವಕನ ಬರ್ಬರ ಹತ್ಯೆ: ನಡು ರಸ್ತೆಯಲ್ಲಿ ಕೊಚ್ಚಿ ಕೊಂದ ಯುವಕರು - murder of a youth in Manjunatha nagara, Bangalore update
ವೀಕೆಂಡ್ ಮಸ್ತಿಯಲ್ಲಿದ್ದ ಯುವಕನನ್ನು ಹಳೇ ದ್ವೇಷದ ಹಿನ್ನಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಯುವಕನ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.
ಸದಾನಂದ ಕೊಲೆಯಾದ ಯುವಕ.ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಬಾಲಾಜಿ ಬಾರ್ಗೆ ಹಾಗೂ ಸದಾನಂದ ಬುಲೆಟ್ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಬೈಕ್ನಲ್ಲಿ ಬಂದು ಸದಾನಂದ ಬಳಿ ಗಲಾಟೆ ಮಾಡಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ಈ ಅಟ್ಟಹಾಸಕ್ಕೆ ಸ್ಥಳೀಯರೇ ಬೆಚ್ಚಿಬಿದ್ದಿದ್ದು ಘಟನೆ ತಿಳಿದ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಲೆಯಾದ ಸದಾನಂದ ಕೆಲವು ಸ್ಥಳೀಯ ಯುವಕರ ಜೊತೆ ಗಲಾಟೆ ಮಾಡಿಕೊಂಡಿದ್ದರು. ಹಾಗೆ ಕೆಲವೊಂದು ಪ್ರಕರಣದಲ್ಲಿ ಭಾಗಿಯಾಗಿದ್ದು ಹಳೇ ದ್ವೇಷಕ್ಕೆ ಕೊಲೆ ನಡೆದಿರುವ ಶಂಕೆ ಪೊಲೀಸರಿಗಿದ್ದು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.