ಬೆಂಗಳೂರು: ಗುರಾಯಿಸಿದ ಎಂಬ ಕಾರಣಕ್ಕೆ ಯುವಕನಿಗೆ ಲಾಂಗ್ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂದೀಪ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ಸಂಬಂಧ ಯೇಸುದಾಸ್, ಮನೋಜ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಸಂದೀಪ್ ಎಸ್ಎಲ್ವಿ ಪಾರ್ಟಿ ಹಾಲ್ ಬಳಿ ನ.8ರಂದು ರಾತ್ರಿ ಗೆಳೆಯರ ಜೊತೆ ಮಾತನಾಡುತ್ತಾ ನಿಂತಿದ್ದ. ಈ ಸಂದರ್ಭ ಏಕಾಏಕಿ ದ್ವಿಚಕ್ರ ವಾಹನದಲ್ಲಿ ಬಂದ ಯೇಸುದಾಸ್ ಹಾಗೂ ಮನೋಜ್ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಸಂದೀಪ್ನ ಕಾಲು ಮತ್ತು ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ.