ಬೆಂಗಳೂರು :ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿ ವಿಲೇಜ್ ರೆಸ್ಟೋರೆಂಟ್ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ರೆಸ್ಟೋರೆಂಟ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಶಂಕರ್, ಕೀರ್ತಿ, ಅಭಿಷೇಕ್,ಪ್ರವೀಣ್ ಕುಮಾರ್, ಹೇಮಂತ್ ಕುಮಾರ್, ಅಭಿಷೇಕ್, ಅಭಿಲಾಷ್ ಎಂಬುವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಘಟನೆ ಹಿನ್ನೆಲೆ :ನ.21ರಂದು ನೀಲಾದ್ರಿ ನಗರದ ರೆಸ್ಟೋರೆಂಟ್ವೊಂದರಲ್ಲಿ ರಾತ್ರಿ 11.30ರ ಸುಮಾರಿಗೆ 15ರಿಂದ 20 ಜನರ ಗುಂಪು ರೆಸ್ಟೋರೆಂಟ್ಗೆ ಬಂದು ಊಟಕ್ಕೆ ಆರ್ಡರ್ ಮಾಡಿದೆ. ಆದರೆ, ರೆಸ್ಟೋರೆಂಟ್ ಮುಚ್ಚುವ ಸಮಯವಾಗಿದ್ದು, ಊಟ ಸಿದ್ಧಪಡಿಸಲು ಸಾಧ್ಯವಿಲ್ಲ ಸಿಬ್ಬಂದಿ ಹೇಳಿದ್ದಾರೆ. ಇಷ್ಟಕ್ಕೆ ಯುವಕರ ಗುಂಪು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.