ಕರ್ನಾಟಕ

karnataka

ETV Bharat / state

ಅಪ್ರಾಪ್ತೆಯ ಮದುವೆಯಾಗಿ ಬಂಧನ ಭೀತಿ; ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

ಅಪ್ರಾಪ್ತೆಯನ್ನು ಮದುವೆಯಾದ ಯುವಕ ಬಂಧನ ಭೀತಿಯಿಂದ ಲಾಡ್ಜ್​ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

youth-committed-suicide-in-bengaluru
ಅಪ್ರಾಪ್ತೆ ಮದುವೆಯಾದ : ಬಂಧನ ಭೀತಿಯಿಂದ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಯುವಕ

By

Published : Aug 16, 2023, 9:25 PM IST

ಬೆಂಗಳೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗಜಾನನ ಲಾಡ್ಜ್​ನಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ನಡೆದಿದೆ. ವಿಜಯಪುರದ ಬಸವನ ಬಾಗೇವಾಡಿ ಮೂಲದ ಶಶಿಧರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾವಿಗೂ ಮುನ್ನ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿದ್ದ ಈತನ ವಿರುದ್ಧ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ಬೆಂಗಳೂರಿಗೆ ಬಂದಿದ್ದು ಕಾಟನ್‌ಪೇಟೆಯ ಗಜಾನನ ಲಾಡ್ಜ್​ನಲ್ಲಿ ರೂಮ್ ಪಡೆದುಕೊಂಡಿದ್ದ. ಬಳಿಕ ಇಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ತಮ್ಮ ಮದುವೆಗೆ ಬಾಲಕಿಯ ಮನೆಯವರ ವಿರೋಧಕ್ಕೆ ಬೇಸತ್ತಿದ್ದ ಯುವಕ ಆತ್ಮಹತ್ಯೆಗೂ ಮುನ್ನ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು‌ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾನೆ‌.

ವಿಡಿಯೋದಲ್ಲಿ, ಆರು ವರ್ಷಗಳ ಕಾಲ ಪ್ರೀತಿಸಿ ನಾನು ಆಕೆಯನ್ನು ಮದುವೆಯಾಗಿದ್ದೆ. ಆದರೆ ನಮ್ಮ ಮದುವೆಗೆ ಹುಡುಗಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ಹುಡುಗಿಗೆ ಕಿರುಕುಳ ನೀಡಿ ಆತ್ಯಾಚಾರವೆಸಗಿ ಮದುವೆ ಮಾಡಿಕೊಂಡಿರುವುದಾಗಿ ತನ್ನ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಕುಟುಂಬಸ್ಥರು ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನನ್ನನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾನೆ.

ಪೊಲೀಸರ ಮೇಲೆಯೂ ಆರೋಪಿಸಿರುವ ಶಶಿಧರ್, ತಾನು ನೀಡಿದ‌ ದೂರನ್ನು ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾನೆ. ಮೊಬೈಲ್ ವಿಡಿಯೋ ಮಾಡಿಕೊಂಡು ಬಳಿಕ ತನ್ನ ಇಸ್​ಸ್ಟಾಗ್ರಾಮ್​ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.‌ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುರಿದು ಬಿದ್ದ ಮದುವೆ, ಯುವಕ ಆತ್ಮಹತ್ಯೆ :ನಿಶ್ಚಯವಾಗಿದ್ದ ಮದುವೆ ಮುರಿದು ಬಿದ್ದಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಆಯನೂರು ಕೋಟೆ ಗ್ರಾಮದಲ್ಲಿ ನಡೆದಿತ್ತು. ಮೃತ ಯುವಕನನ್ನು ಸ್ವಾಮಿನಾಥ (31) ಎಂದು ಗುರುತಿಸಲಾಗಿತ್ತು. ಸ್ವಾಮಿನಾಥ್​ ತಂದೆಯ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದನು. ಕಳೆದ ಒಂದು ತಿಂಗಳ ಹಿಂದೆ ಸ್ವಾಮಿಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಕೋಣನತಲೆ ಗ್ರಾಮದ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ, ಕಾರಣಾಂತರಗಳಿಂದ ವಿವಾಹ ಮುರಿದು‌ಬಿದ್ದಿದೆ. ಇದರಿಂದ ಮನನೊಂದಿದ್ದ ಸ್ವಾಮಿ, ತಮ್ಮ ಜಮೀನಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ :ಮೊಬೈಲ್ ಕದ್ದು ಗೂಗಲ್ ಪೇ, ಫೋನ್ ಪೇ ಮೂಲಕ ಹಣ ದೋಚುತ್ತಿದ್ದ ಅಂತರ್‌ರಾಜ್ಯ ಕಳ್ಳರ ಬಂಧನ

ABOUT THE AUTHOR

...view details