ಕರ್ನಾಟಕ

karnataka

ETV Bharat / state

ಸೋನಿಯಾ ಜನ್ಮದಿನ: ಯುವ ಕಾಂಗ್ರೆಸ್​​​ನಿಂದ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ - ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸುಮಾರು 70ಕ್ಕೂ ಅಧಿಕ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಿತು.

Youth congress made mass baby shower program
ಯುವ ಕಾಂಗ್ರೆಸ್​​​ನಿಂದ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

By

Published : Dec 9, 2021, 7:07 PM IST

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಜನ್ಮ ದಿನದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಯುವ ಕಾಂಗ್ರೆಸ್​​​ನಿಂದ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

ಸರ್ವಜ್ಞ ನಗರದ ಬಾಣಸವಾಡಿ ವಾರ್ಡಿನಲ್ಲಿ ನಡೆದ ಸಮಾರಂಭದಲ್ಲಿ 70ಕ್ಕೂ ಅಧಿಕ ಗರ್ಭಿಣಿಯರಿಗೆ ಮಾಜಿ ಗೃಹ ಸಚಿವ, ಶಾಸಕ ಕೆ.ಜೆ. ಜಾರ್ಜ್, ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಅವರು ಬಾಗಿನ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ತಾಯ್ತನದ ನಿರೀಕ್ಷೆಯಲ್ಲಿರುವ ಗರ್ಭಿಣಿಯರು ರೇಷ್ಮೆ ಸೀರೆ ಉಟ್ಟು ಅಲಂಕಾರಗೊಂಡಿದ್ದರು. ನೆರೆ ಹೊರೆ, ಸ್ನೇಹಿತೆಯರ ಜೊತೆ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಭ್ರಮಿಸಿದರು.

ಸಮಾರಂಭದಲ್ಲಿ ಜವಾಹರ್ ಬಾಲಭವನದ ಅಧ್ಯಕ್ಷ ಜೆ. ಸಿರಿಲ್ ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಘು ದೇವರಾಜ್ ಮತ್ತಿತರ ಯುವ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ 15 ಸ್ಥಾನಗಳನ್ನು ಗೆಲ್ಲಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ

ABOUT THE AUTHOR

...view details