ಬೆಂಗಳೂರು: ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ ಖಂಡಿಸಿ ಇಂದು ಮೌರ್ಯ ಸರ್ಕಲ್ನಲ್ಲಿ ಯೂತ್ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನರೇಂದ್ರ ಸಿಂಗ್ ತೋಮರ್ ಮುಖವಾಡ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಅನ್ನದಾತರ ಸಮಸ್ಯೆಗಳನ್ನು ಬಗೆಹರಿಸಲು ವಿಫಲವಾಗಿರುವ ಕೇಂದ್ರ ಸರ್ಕಾರ, ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನ ಹತ್ತಿಕ್ಕುವ ಕುತಂತ್ರ ನಡೆಸುತ್ತಿದೆ. ನರೇಂದ್ರ ಮೋದಿ ಸರ್ಕಾರ ಕೂಡಲೇ ರೈತರ ಬೇಡಿಕೆಯನ್ನ ಈಡೇರಿಸಬೇಕೆಂದು ಆಗ್ರಹಸಿ ಪ್ರತಿಭಟನೆ ಮಾಡಿದರು.
ಮೌರ್ಯ ವೃತ್ತದ ಬಳಿ ಕಾಂಗ್ರೆಸ್ ಪ್ರತಿಭಟನೆ ಎನ್ಡಿಎ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸಿದ ಹೋರಾಟವನ್ನು ಹತ್ತಿಕ್ಕುವ ಮೂಲಕ ರೈತರ ವಿರುದ್ಧ ಲಾಠಿ ಪ್ರಹಾರ ನಡೆಸಿದೆ. ಇದು ದೇಶದ ಇತಿಹಾಸದಲ್ಲಿ ಅತ್ಯಂತ ಕೀಳು ಮಟ್ಟದ ನಡೆಯಾಗಿದೆ. ಸಚಿವ ಅಮಿತ್ ಶಾ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರ ಬೇಡಿಕೆಗೆ ಸ್ಪಂದಿಸುವ ಬದಲಾಗಿ ರೈತರ ವಿರುದ್ಧವೇ ಕಠಿಣ ಕ್ರಮಕ್ಕೆ ಮುಂದಾಗಿರುವುದು ಶೋಚನೀಯ. ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾದ ಎಸ್.ಮನೋಹರ್ ನೇತೃತ್ವದಲ್ಲಿ ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.