ಬೆಂಗಳೂರು: ಸಿ.ಪಿ.ಯೋಗೇಶ್ವರ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದ ಮುಂದೆ ಬಕೆಟ್ ಹಿಡಿದುಕೊಂಡು 'ಬಕೆಟ್ ಯೋಗೇಶ್ವರ್' ಎಂದು ಸಿನಿಮಾ ಹಾಡಿಗೆ ಕುಣಿಯುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಸಿ.ಪಿ.ಯೋಗೇಶ್ವರ್ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ - ಸಿ.ಪಿ.ಯೋಗೇಶ್ವರ್ ವಿರುದ್ಧ
ಬೆಂಗಳೂರು ನಗರದ ಕಾಂಗ್ರೆಸ್ ಭವನದ ಎದುರು ಯುವ ಕಾಂಗ್ರೆಸ್ ವತಿಯಿಂದ ಸಿ.ಪಿ.ಯೋಗೇಶ್ವರ್ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, 'ಬಕೆಟ್ ಯೋಗೇಶ್ವರ್' ಎಂದು ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ.
ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಮೆಗಾಸಿಟಿಯಲ್ಲಿ ಅವ್ಯವಹಾರ ಮಾಡಿರುವ ಯೋಗೇಶ್ವರ್, ಮೈತ್ರಿ ಸರ್ಕಾರವನ್ನು ಕೆಳಗಿಳಿಸಿದ್ದಾರೆ. ಈಗ ಬಿಜೆಪಿ ಸರ್ಕಾರ ಇಳಿಸೋಕೆ ಪ್ರಯತ್ನ ಮಾಡ್ತಿದ್ದಾರೆ. ಇಂಥ ನಯವಂಚಕ ಈಗ ನಮ್ಮ ನಾಯಕರ ವಿರುದ್ಧ ಮಾತನಾಡುತ್ತಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಹೇಳಿಕೆ ಕೊಡ್ತಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇಂಥವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮರ್ಥಿಸಿಕೊಳ್ತಾರೆ. ಕಟೀಲು ಗ್ರಾಮಪಂಚಾಯಿತಿ ಸದಸ್ಯನಾಗುವುದಕ್ಕೂ ಲಾಯಕ್ ಇಲ್ಲ. ಇವರನ್ನು ಬಿಜೆಪಿ ಇಟ್ಟುಕೊಂಡಿರುವುದು ದುರಾದೃಷ್ಟ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.