ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ,ನಗರದ ಮೌರ್ಯ ಸರ್ಕಲ್ನಲ್ಲಿ ಧರಣಿ ನಡೆಸಲಾಯಿತು.
ಇಡಿ ಅಧಿಕಾರಿಗಳಿಂದ ಡಿಕೆಶಿ ಬಂಧಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಯುವ ಕಾರ್ಯಕರ್ತರು, ಪ್ರತಿಕೃತಿ ದಹಿಸಿ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
ರೇಸ್ ಕೋರ್ಸ್ ರಸ್ತೆಯಲ್ಲಿ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿ, ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿ ತೆರಳಲು ಮುಂದಾದ ಸಂದರ್ಭ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಕರೆದೊಯ್ಯಲಾಯಿತು.
ಇಡಿ ಅಧಿಕಾರಿಗಳಿಂದ ಡಿಕೆಶಿ ಬಂಧನ ಪ್ರಯತ್ನ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಶಾಸಕ ಶ್ರೀನಿವಾಸ್ ಗೌಡ ಸದನದಲ್ಲಿ ಆಪರೇಷನ್ ಕಮಲದ ಬಗ್ಗೆ ಹೇಳಿದ್ದಾರೆ. ಯಾಕೆ ಇನ್ನೂ ಕ್ರಮ ಕೈಗೊಂಡಿಲ್ಲ. ಅದು ನಿಮ್ಮ ಕಣ್ಣಿಗೆ ಕಾಣಿಸ್ತಿಲ್ಲವೇ? ಶ್ರೀರಾಮುಲು ಹಣದ ಅಮಿಷ ಒಡ್ಡಿರುವುದು ಗೊತ್ತಿಲ್ಲವೇ? ಅದನ್ನು ಎಫ್ಐಆರ್ ಮಾಡಿಕೊಂಡಿಲ್ಲ ಎಂದು ಈ ವೇಳೆ ಪ್ರಶ್ನಿಸಿದರು.