ಬೆಂಗಳೂರು :ಸಂಸದ ತೇಜಸ್ವಿ ಸೂರ್ಯ ವಿರುದ್ಧ ಯುವ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟಿಸಿದರು. ಬೆಂಗಳೂರು ಕಾಂಗ್ರೆಸ್ ನಗರ ಘಟಕದ ಮುಖಂಡ ಮನೋಹರ್ ನೇತೃತ್ವದಲ್ಲಿ ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.
ತೇಜಸ್ವಿ ಸೂರ್ಯ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ಬೆಂಗಳೂರು ಉಗ್ರರ ಹಬ್ ಆಗುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕೆಂಪೇಗೌಡರು ಕಟ್ಟಿದ ಬೆಂಗಳೂರು ಮಹಾನಗರಕ್ಕೆ ಅವಮಾನ ಮಾಡಿದ್ದಾರೆ ಅಂತಾ ಪ್ರತಿಭಟನಾಕಾರರು ಕಿಡಿಕಾರಿದರು. ಸಂಸದರ ಭಾವಚಿತ್ರ ಸುಡುವ ಮೂಲಕ ಆಕ್ರೋಶ ಹೊರ ಹಾಕಿದರು.
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ ಪ್ರತಿಭಟನೆಯ ನೇತೃತ್ವವಹಿಸಿದ್ದ ಯುವ ಮುಖಂಡ ಮನೋಹರ್ ಮಾತನಾಡಿ, ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದಾರೆ. ಉಗ್ರಗಾಮಿ ಚಟುವಟಿಕೆ ನಿಯಂತ್ರಿಸಲು ಅವರ ಪ್ರಯತ್ನವನ್ನು ಪ್ರತಿಯೊಬ್ಬರು ಬೆಂಬಲಿಸುತ್ತೇವೆ. ಆದರೆ, ಮಹಾನಗರವನ್ನು ಉಗ್ರಗಾಮಿಗಳ ಕೇಂದ್ರ ಎಂದು ಹೇಳುವ ಮೂಲಕ ಬೆಂಗಳೂರಿಗರನ್ನು ಅವಮಾನಿಸಿದ್ದಾರೆ.
ಇವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ನಗರದ ಜನತೆಯ ಕ್ಷಮೆ ಕೋರಬೇಕು. ಬಿಹಾರ ವಿಧಾನಸಭೆ ಚುನಾವಣೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿರುವ ತೇಜಸ್ವಿಸೂರ್ಯ ಅಲ್ಲಿಂದಲೇ ಸ್ಪರ್ಧಿಸಬೇಕೆಂದು ಸಲಹೆ ನೀಡಿದರು.
ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರತಿಭಟನೆ ಮಹಾನಗರದಿಂದ ಆಯ್ಕೆಯಾದ ನಂತರ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಸಂಸದರು, ಕೇವಲ ಇಂತಹ ಹೇಳಿಕೆ ನೀಡುವ ಮೂಲಕ ಜನರ ಭಾವನೆ ಕೆರಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿಯವರಿಗೆ ನಗರದ ಜನತೆಯ ಬಗ್ಗೆ ಕಾಳಜಿ ಇದ್ದರೆ ಸಂಸದರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.