ಬೆಂಗಳೂರು: ಬೈಕ್ ಅಪಘಾತ ವಿಚಾರವಾಗಿ ನಡೆದ ಕೊಲೆ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು. 'ಸಮಾಜಕ್ಕೆ ಬೆಂಕಿ ಇಡೋ ಅಜ್ಞಾನೇಂದ್ರ ಎಲುಬಿಲ್ಲದ ನಾಲಿಗೆ' ಎಂದು ಆರಗ ಜ್ಞಾನೇಂದ್ರ ವಿರುದ್ಧ ಪೋಸ್ಟರ್ ಪ್ರದರ್ಶಿಸಿದರು.
ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ - ಬೈಕ್ ಅಪಘಾತ ವಿಚಾರವಾಗಿ ನಡೆದ ಚಂದ್ರು ಕೊಲೆ ಪ್ರಕರಣ
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗ ನಲಪಾಡ್ ನೇತೃತ್ವದಲ್ಲಿ ಗೃಹ ಸಚಿವರ ವಿರುದ್ಧ ಪ್ರತಿಭಟನೆ ಮಾಡಲಾಯಿತು.
ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ; ಆರಗ ವಿರುದ್ಧ ದೂರು
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಲಪಾಡ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಬಳಿಕ ಫ್ರೀಡಂಪಾರ್ಕ್‌ಗೆ ತೆರಳಲು ಹೊರಟಾಗ ಪೊಲೀಸರು ತಡೆದರು.
ಇದನ್ನೂ ಓದಿ: ಅಲ್ಪಸಂಖ್ಯಾತರ ಓಲೈಕೆಗಾಗಿ ಎಷ್ಟು ದಿನ ಸುಳ್ಳು ಸುದ್ದಿ ಹಬ್ಬಿಸುತ್ತೀರಿ?: ರೇಣುಕಾಚಾರ್ಯ
Last Updated : Apr 7, 2022, 5:30 PM IST