ಬೆಂಗಳೂರು : ನಗರದಲ್ಲಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಅಪಾರ್ಟ್ಮೆಂಟ್ವೊಂದರ 33ನೇ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ. ಕೆ.ಆರ್. ಪುರಂ ಠಾಣೆ ವ್ಯಾಪ್ತಿಯ ಅಯ್ಯಪ್ಪ ನಗರದ ಕೊಡಿಗೇಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ದೀಪಾಂಶು ಶರ್ಮಾ (27) ಎಂದು ಗುರುತಿಸಲಾಗಿದೆ.
ಕೆಆರ್ ಪುರಂ ಪೊಲೀಸರ ಮಾಹಿತಿ :ನಿವೃತ್ತ ವಾಯು ಸೇನಾಧಿಕಾರಿಯ ಮಗನಾಗಿರುವ ದೀಪಾಂಶು ಶರ್ಮಾ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದು, ಪಿಜಿಯಲ್ಲಿ ವಾಸವಾಗಿದ್ದರು. ಶುಕ್ರವಾರ ಬೆಳಗ್ಗೆ ತನ್ನ ಸ್ನೇಹಿತನ ಅಪಾರ್ಟ್ಮೆಂಟ್ನಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.