ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಗಾಂಜಾ ಮತ್ತಿನಲ್ಲಿ ಆರಂಭವಾದ ಗಲಾಟೆ ಓರ್ವನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯ ವಿನಾಯಕ ನಗರದಲ್ಲಿ ನಡೆದಿದೆ.
ಥಾಮಸ್ ಮೃತ ವ್ಯಕ್ತಿಯಾಗಿದ್ದು, ಶನಿವಾರ ಬೆಳಗ್ಗೆ ಕಟ್ಟಡದಿಂದ ಕೆಳಗೆ ಬಿದ್ದು ಥಾಮಸ್ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಅಶೋಕ್ ಮತ್ತು ಮೃತ ಥಾಮಸ್ ನಡುವೆ ಜಗಳ ಆರಂಭವಾಗಿದ್ದು, ಇಬ್ಬರು ಪರಸ್ಪರ ತಳ್ಳಾಡಿಕೊಂಡಿದ್ದಾರೆ. ಈ ಹಂತದಲ್ಲಿ ಕಟ್ಟಡ ಮೇಲೆ ಅಳವಡಿಸಿದ್ದ ಶೀಟ್ ತುಂಡಾದ ಪರಿಣಾಮ ಥಾಮಸ್ ನೆಲಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.