ಕರ್ನಾಟಕ

karnataka

ETV Bharat / state

ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಿ: ಯುವ ಕಾಂಗ್ರೆಸ್ ನಾಯಕರಿಗೆ ಹೆಬ್ಬಾಳ್ಕರ್ ಕರೆ - ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ನಮ್ಮ ನಾಯಕ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರ ಜೊತೆ ಸೇರಿ ಪಕ್ಷ ಕಟ್ಟಿದ್ದರಿಂದ ಇಂದು ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

By

Published : Jul 28, 2023, 10:18 PM IST

Updated : Jul 28, 2023, 11:02 PM IST

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, ಈ ಗುರಿ ತಲುಪಬೇಕಿದೆ ಎಂದರು.

ಭವಿಷ್ಯದ ನಾಯಕರನ್ನು ರೂಪಿಸಲು ಯುವ ಘಟಕಗಳು ಪ್ರಮುಖ ಪಾತ್ರ ವಹಿಸುತ್ತವೆ. ನಾನು ಕೂಡ ಪಂಚಾಯತಿ ಮಟ್ಟದಲ್ಲಿ ರಾಜಕೀಯ ಆರಂಭಿಸಿ, ಇಂದು ಕರ್ನಾಟಕದಲ್ಲಿ ಸಚಿವೆಯಾಗಿರುವೆ. ಎರಡು ಬಾರಿ ಚುನಾವಣೆಯಲ್ಲಿ ಸೋತರೂ ಎದೆಗುಂದದೇ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಇಂದು ಸಚಿವೆಯಾಗಿರುವೆ ಎಂದರು.

ಕಾಂಗ್ರೆಸ್ ಇಂದು ಕರ್ನಾಟಕದಲ್ಲಿ ಅಧಿಕಾರ ಹಿಡಿದಿದೆ:ನಮ್ಮೆಲ್ಲರ ನಾಯಕ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಜೈಲಿಗಟ್ಟಿದರೂ ಎದೆಗುಂದದೆ ಮುನ್ನಡೆದರು. ಅವರ ರಾಜ್ಯದ ಅಚ್ಚುಮೆಚ್ಚಿನ ನಾಯಕ ಸಿದ್ದರಾಮಯ್ಯ ಕೂಡಾ ಜತೆಗೂಡಿ ಪಕ್ಷ ಕಟ್ಟಿದ ಫಲವಾಗಿ ಕಾಂಗ್ರೆಸ್ ಇಂದು ಕರ್ನಾಟಕದಲ್ಲಿ ಅಧಿಕಾರ ಹಿಡಿದಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​​ ಹೇಳಿದರು.

ಯುವ ಕಾಂಗ್ರೆಸ್​ನಿಂದ ಅನೇಕ ನಾಯಕರು ಬೆಳೆದು ಬಂದಿದ್ದಾರೆ: ಯುವ ಸಮುದಾಯ ಎಂದರೆ ಭವಿಷ್ಯ ಎಂಬುದನ್ನು ಅರಿತ ಇಂದಿರಾ ಗಾಂಧಿ ಅವರು, ಭವಿಷ್ಯದ ನಾಯಕರ ನಿರ್ಮಾಣಕ್ಕೆ ಯುವ ಕಾಂಗ್ರೆಸ್ ಆರಂಭಿಸಿದರು. ಪರಿಣಾಮ ಯುವ ಕಾಂಗ್ರೆಸ್​ನಿಂದ ಅನೇಕ ನಾಯಕರು ಬೆಳೆದು ಬಂದಿದ್ದಾರೆ. ರಾಜ್ಯದಲ್ಲಿ ನಾನು ಸೇರಿದಂತೆ ಅನೇಕ ನಾಯಕರು ಯುವ ಕಾಂಗ್ರೆಸ್​ನಲ್ಲಿ ಪಳಗಿದವರು. ನಾಯಕತ್ವ, ಹೋರಾಟದ ಗುಣಗಳನ್ನು ಬೆಳೆಯಿಸಿಕೊಳ್ಳಲು ಯುವ ಕಾಂಗ್ರೆಸ್ ಗರಡಿ ಮನೆಯಂತೆ, ನೀವು ಆ ಗರಡಿ ಮನೆಯಲ್ಲಿ ಎಂತಹ ಪಟ್ಟುಗಳನ್ನು ಕಲಿಯುತ್ತೀರಿ ಎಂಬುದರ ಮೇಲೆ ನಿಮ್ಮ ಭವಿಷ್ಯ ನಿರ್ಧಾರವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಿಮ್ಮ ಪಾತ್ರವೂ ಇದೆ: ಯುವ ಸಮುದಾಯ ಮನಸ್ಸು ಮಾಡಿದರೆ ಜಗತ್ತನ್ನೇ ಬದಲಿಸುವ ಶಕ್ತಿ ಇದೆ. ಇದಕ್ಕೆ ಇತ್ತೀಚಿನ ರಾಜ್ಯ ವಿಧಾನಸಭೆ ಚುನಾವಣೆ ಸಾಕ್ಷಿ. ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಿಮ್ಮ ಪಾತ್ರವೂ ಇದೆ. ಅದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು.

ಈಗ ನಿಮ್ಮ ನಮ್ಮ ಗುರಿ 2024ರ ಚುನಾವಣೆ. ದೇಶ ಈಗ ಅತ್ಯಂತ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಸಾಂವಿಧಾನಿಕ ಸಂಸ್ಥೆಗಳು ಅಪಾಯಕ್ಕೆ ಸಿಲುಕಿವೆ. ಈ ಅಪಾಯದ ಪರಿಸ್ಥಿತಿಯಿಂದ ದೇಶವನ್ನು ಪಾರು ಮಾಡಬೇಕಾದರೆ, ಯುವ ಸಮುದಾಯ ಮತ್ತೊಂದು ಸಂಕಲ್ಪ ಮಾಡಲೇಬೇಕು ಎಂದು ಸಚಿವರು ಕರೆಕೊಟ್ಟರು.

ಇದನ್ನೂ ಓದಿ:Gruha Lakshmi scheme: ಜುಲೈ 19 ರಿಂದ 'ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ.. ಸಮಗ್ರ ಮಾಹಿತಿ

Last Updated : Jul 28, 2023, 11:02 PM IST

ABOUT THE AUTHOR

...view details