ಬೆಂಗಳೂರು :ಸರ್, ವೈಎಸ್‌ವಿ ದತ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ವೈಎಸ್‌ವಿ ದತ್ತ ಬೆಂಬಲಿಗರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ ಪ್ರಸಂಗ ನಡೆಯಿತು.
ರಾಗಿ ಬೆಳೆಗಾರರ ಸಮಸ್ಯೆ ಕುರಿತಾಗಿ ರೈತರ ನಿಯೋಗದ ಜೊತೆ ವೈಎಸ್‌ವಿ ದತ್ತ ಸೋಮವಾರ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ವೇಳೆ ದತ್ತ ಬೆಂಬಲಿಗರು ಸರ್.. ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದರು. ಈ ವೇಳೆ ದತ್ತ ಅವರು ಸುಮ್ಮನಿರುವಂತೆ ಅಭಿಮಾನಿಗಳಿಗೆ ಸೂಚಿಸಿದರು.