ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಕೊನೆಯ ಹಾಗೂ ಐದನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈವರೆಗೆ ಯುವನಿಧಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿಗಳೆಷ್ಟು ಎಂಬ ವರದಿ ಇಲ್ಲಿದೆ ನೋಡಿ.
ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಐದನೇ ಹಾಗೂ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಡಿ.26 ರಂದು ಚಾಲನೆ ನೀಡಲಾಗಿದೆ. ರಾಜ್ಯದ ಪದವೀಧರರು, ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರು ಪ್ರತಿ ತಿಂಗಳು 3,000 ರೂ., ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂ. ರಂತೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಜನವರಿಯಲ್ಲಿ ಅರ್ಹ ನಿರುದ್ಯೋಗಿಗಳ ಖಾತೆಗೆ ಹಣ ಜಮೆಯಾಗಲಿದೆ.
ಈವರೆಗೆ ಎಷ್ಟು ಅರ್ಜಿ ಸ್ವೀಕಾರ ?:ಡಿ.26 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ಕೌಶಲ್ಯಾಭಿವೃದ್ಧಿ ಇಲಾಖೆ ನೀಡಿದ ಅಂಕಿಅಂಶದಂತೆ ಡಿ.27ರ ಸಂಜೆ ಆರು ಗಂಟೆವರೆಗೆ ಯುವನಿಧಿ ಯೋಜನೆಯಡಿ ಒಟ್ಟು 2,032 ಅರ್ಜಿ ಸ್ವೀಕರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಯುವನಿಧಿ ಭತ್ಯಗೆ ಅರ್ಜಿ ಸಲ್ಲಿಸಬಹುದಾಗಿದೆ. ಆ ಮೂಲಕ ಬುಧವಾರ ಸಂಜೆ 6 ಗಂಟೆವರೆಗೆ 2,032 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
2023ರಲ್ಲಿ ತೇರ್ಗಡೆಯಾದ ದಿನಾಂಕದಿಂದ 180 (6 ತಿಂಗಳು) ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ನಿರುದ್ಯೋಗ ವ್ಯಕ್ತಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಹಣ ನೀಡಲು ಯುವ ನಿಧಿ ಯೋಜನೆಯನ್ನು ಈ ಕೆಲ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ.
ಷರತ್ತು ಮತ್ತು ನಿಬಂಧನೆಗಳು :