ಕರ್ನಾಟಕ

karnataka

ETV Bharat / state

ಪೂರ್ವಭಾವಿ ಸಭೆ: ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಅದ್ಧೂರಿ ಚಾಲನೆಗೆ ನಿರ್ಧಾರ

ಬೆಂಗಳೂರಿನ ವಿಧಾನಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

preliminary meeting was held.
ಯುವನಿಧಿ ಯೋಜನೆ ಜಾರಿ ಕುರಿತು ಪೂರ್ವಭಾವಿ ಸಭೆ ನಡೆಯಿತು.

By ETV Bharat Karnataka Team

Published : Jan 4, 2024, 6:22 PM IST

Updated : Jan 4, 2024, 9:01 PM IST

ಬೆಂಗಳೂರು:ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಜಾರಿಗೊಳಿಸುವ ಕುರಿತು ವಿಧಾನಸೌಧದಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಪೂರ್ವಭಾವಿ ಸಭೆ ನಡೆಯಿತು.

ಯುವಜನರ ಆಶೋತ್ತರಗಳಿಗೆ ಪೂರಕವಾದ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ರಾಜ್ಯದ ಯುವಜನರಿಗೆ ಸಮರ್ಪಿಸುವ ಕಾರ್ಯಕ್ರಮ ಅದ್ಧೂರಿಯಾಗಿ ಆಯೋಜಿಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಶಿವಮೊಗ್ಗ ನಗರದಲ್ಲಿ ಈ ತಿಂಗಳ 12ರಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ʼಯುವನಿಧಿʼ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಫಲಾನುಭವಿಗಳಿಗೆ ನೇರಹಣ ಪಾವತಿಸುವ ಯೋಜನೆ ಇದಾಗಿದೆ. ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿಸಲು ಉನ್ನತ ಮಟ್ಟದ ಸಭೆಯಲ್ಲಿ ರೂಪುರೇಷಗಳನ್ನು ರೂಪಿಸಲಾಯಿತು. ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ನಾಯಕರು ಘೋಷಿಸಿದಂತೆ ಯುವನಿಧಿ ಯೋಜನೆ ಜಾರಿಗೆ ತರಲು ತೀರ್ಮಾನಿಸಲಾಗಿದೆ.

ಈಗಾಗಲೇ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಮಹತ್ತರ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜನಪ್ರಿಯಗೊಂಡಿವೆ. ಅವುಗಳಂತೆ ಯುವಜನರ ಆಶೋತ್ತರಗಳಿಗೆ ಪೂರಕವಾದ ಯುವನಿಧಿ ಯೋಜನೆ ಯಶಸ್ವಿಗೊಳಿಸಲು ತೀರ್ಮಾನಿಸಲಾಗಿದೆ.

ಪೂರ್ವಭಾವಿ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್‌, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಹಿರಿಯ ಅಧಿಕಾರಿಗಳಾದ ಉಮಾ ಮಹೇಶ್ವರನ್‌, ಡಾ. ಏಕರೂಪ್‌ ಕೌರ್‌, ಡಾ. ಹೇಮಂತ ನಿಂಬಾಳ್ಕರ್‌ ಮತ್ತಿತರರು ಭಾಗವಹಿಸಿದ್ದರು.

ಶಿವಮೊಗ್ಗದಲ್ಲಿ ಸ್ಥಳ ಪರಿಶೀಲನೆ:ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌, ಎಂ ಸಿ ಸುಧಾಕರ್, ಮಧು ಬಂಗಾರಪ್ಪ ಸೇರಿ ನಿನ್ನೆ ಶಿವಮೊಗ್ಗಕ್ಕೆ ಭೇಟಿ ನೀಡಿ ಯುವನಿಧಿ ಉದ್ಘಾಟನೆ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿದ್ದರು.ಈ ವೇಳೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಮಾತನಾಡಿ, ಜನವರಿ 12 ರಂದು ವಿವೇಕಾನಂದ ಜಯಂತಿ ದಿನದಂದು ನಮ್ಮ ಸರ್ಕಾರದ ಐದನೇ ಗ್ಯಾರಂಟಿ ಯುವ‌ನಿಧಿ ಜಾರಿ ಮಾಡಲಿದ್ದೇವೆ. ಯುವನಿಧಿ ಕಾರ್ಯಕ್ರಮ ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ಆಯೋಜನೆ ಮಾಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಭಾಗವಹಿಸುವರು ಎಂದು ಮಾಹಿತಿ ನೀಡಿದ್ದರು.

1 ಲಕ್ಷ ಜನ ಸೇರುವ ನಿರೀಕ್ಷೆ :1 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ 25 ಸಾವಿರ ನೋಂದಣಿ ಮಾಡಿಸಿದ್ದಾರೆ. ಈ ನೋಂದಣಿಗೆ ಯಾವುದೇ ಡೆಡ್ ಲೈನ್ ಇಲ್ಲ ಎಂದು ಸ್ಪಷ್ಟಪಡಿಸಿದರು. ಗ್ಯಾರೆಂಟಿಗಳನ್ನು ಕರ್ನಾಟಕದ ಪ್ರತಿ ಮೂಲೆಗೆ ತಲುಪಿಸಬೇಕು. ಆ ಉದ್ದೇಶದಿಂದ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ಕಾರ್ಯಕ್ರಮಗಳನ್ನು ವಿಭಾಗವಾರು ಮಾಡಿದ್ದೇವೆ ಎಂದರು.

ಇದನ್ನೂಓದಿ:ಬಿಜೆಪಿಯವರಿಗೆ ಕೆಲಸವಿಲ್ಲದೆ, ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ

Last Updated : Jan 4, 2024, 9:01 PM IST

ABOUT THE AUTHOR

...view details