ಕರ್ನಾಟಕ

karnataka

ETV Bharat / state

ವಿವಿಧ ಆಯಾಮಗಳಲ್ಲಿ ಯುವರಾಜ್​ ಪ್ರಕರಣದ ತನಿಖೆ ನಡೆಯುತ್ತಿದೆ: ಸಚಿವ ಬೊಮ್ಮಾಯಿ - Yuvraj Swamy case

ನಮ್ಮ ಜೊತೆಗೂ ಫೋಟೋ ತೆಗೆಸಿಕೊಳ್ಳುತ್ತಾರೆ. ಇಲ್ಲಿ ಪ್ರಶ್ನೆ ಅದಲ್ಲ, ಪ್ರಶ್ನೆ ಇರುವುದು ಯುವರಾಜ ಅವರ ವ್ಯವಹಾರಗಳು. ಆ ನಿಟ್ಟಿನಲ್ಲಿ ತನಿಖೆ ನಡೀತಿದೆ. ಯುವರಾಜ್ ವಿರುದ್ಧ ಚಾರ್ಜ್ ಶೀಟ್ ಹಾಕುವವರೆಗೂ ನಮ್ಮ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

basavaraj bommai
ಸಚಿವ ಬೊಮ್ಮಾಯಿ

By

Published : Jan 9, 2021, 2:49 PM IST

ಬೆಂಗಳೂರು: ಯುವರಾಜ್​ ಪ್ರಕರಣದಲ್ಲಿ ಕೆಲವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದು, ಎಲ್ಲಾ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಯುವರಾಜ್ ಆರ್​ಎಸ್ಎಸ್, ಬಿಜೆಪಿ ನಾಯಕರ ಜೊತೆ ಫೋಟೋ ತೆಗೆಸಿಕೊಂಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಹಲವು ಜನ ಇತರರ ಜತೆ ಫೊಟೋ ತೆಗೆಸಿಕೊಳ್ಳುತ್ತಾರೆ. ತುಂಬಾ ಜನ ಅಪರಾಧ ಇರುವವರು ಫೋಟೋ ತೆಗೆಸಿಕೊಳ್ಳುತ್ತಾರೆ ಎಂದರು.

ನಮ್ಮ ಜೊತೆಗೂ ಫೋಟೋ ತೆಗೆಸಿಕೊಳ್ಳುತ್ತಾರೆ. ಇಲ್ಲಿ ಪ್ರಶ್ನೆ ಅದಲ್ಲ, ಪ್ರಶ್ನೆ ಇರುವುದು ಯುವರಾಜ ಅವರ ವ್ಯವಹಾರಗಳು. ಆ ನಿಟ್ಟಿನಲ್ಲಿ ತನಿಖೆ ನಡೀತಿದೆ. ಯುವರಾಜ್ ವಿರುದ್ಧ ಚಾರ್ಜ್ ಶೀಟ್ ಹಾಕುವವರೆಗೂ ನಮ್ಮ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದರು.

ABOUT THE AUTHOR

...view details