ಕರ್ನಾಟಕ

karnataka

ETV Bharat / state

ಜಮೀರ್ ಅಹ್ಮದ್ ಆರೋಗ್ಯವಾಗಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.. ಅಬ್ದುಲ್ ಅಜೀಂ - ಡಾ ಜಿ ಪರಮೇಶ್ವರ್

ಮಾಜಿ ಸಚಿವ ಜಮಿರ್ ಅಹ್ಮದ್ ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ತಿಳಿಸಿದ್ದಾರೆ.

ಅಬ್ದುಲ್ ಅಜೀಂ

By

Published : Oct 20, 2019, 8:37 PM IST

Updated : Oct 20, 2019, 10:58 PM IST

ಬೆಂಗಳೂರು: ಮಾಜಿ ಸಚಿವ ಜಮಿರ್ ಅಹ್ಮದ್ ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ತಿಳಿಸಿದ್ದಾರೆ.

ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿ ಜಮೀರ್ ಅಹ್ಮದ್ ಆರೋಗ್ಯ ವಿಚಾರಿಸಿ ತೆರಳುವ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಅವರು ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ವಿಚಾರದಲ್ಲಿ ಯಾವುದೇ ಆತಂಕ ಬೇಡ. ಯಾವುದೇ ಸಮಸ್ಯೆ ಇಲ್ಲ ಎಂದರು.

ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ

ಸದ್ಯ ಅವರು ವಿಶ್ರಾಂತಿಯಲ್ಲಿದ್ದು, ಬಳಿಕ ಆದಷ್ಟು ಬೇಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿದ್ದಾರೆ. ಇಂದು ಅವರ ಕುಟುಂಬ ವರ್ಗದವರನ್ನು ಭೇಟಿ ಮಾಡಿ ಮಾತನಾಡಿಸಿ ಬಂದಿದ್ದೇವೆ ಎಂದರು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸದ ಮಾಜಿ ಡಿಸಿಎಂ :ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಮೀರ್ ಅಹ್ಮದ್ ಆರೋಗ್ಯ ವಿಚಾರಿಸಲು ಆಗಮಿಸಿದ ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅರ್ಧಗಂಟೆಗೂ ಹೆಚ್ಚುಕಾಲ ಆಸ್ಪತ್ರೆಯಲ್ಲಿದ್ದ ಅವರು ಜಮೀರ್ ಭೇಟಿಗೆ ಅವಕಾಶ ಲಬಿಸಿತೋ, ಇಲ್ಲವೋ ಎನ್ನುವ ಬಗ್ಗೆ ಕೂಡ ಮಾಹಿತಿ ನೀಡಲಿಲ್ಲ.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಇನ್ನೂ ಒಂದೆರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮರಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Last Updated : Oct 20, 2019, 10:58 PM IST

ABOUT THE AUTHOR

...view details