ಬೆಂಗಳೂರು:ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ. ಈ ಹಿನ್ನೆಲೆಯಲ್ಲಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಜಮೀರ್ ಅಹಮದ್ ಖಾನ್ ಒತ್ತಾಯಿಸಿದರು. ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಸಚಿವ ಈಶ್ವರಪ್ಪ ರಾಜೀನಾಮೆಗೆ ಜಮೀರ್ ಅಹ್ಮದ್ ಒತ್ತಾಯ - ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ಜಮೀರ್ ಅಹ್ಮದ್ ಒತ್ತಾಯ
ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸಂತೋಷ್ ಪಾಟೀಲ್ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೂ ಈ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ. ಈ ಹಿಂದೆ ಪೊಲೀಸ್ ಅಧಿಕಾರಿ ಗಣಪತಿ ಅವರ ವಿಚಾರದಲ್ಲಿ ಆರೋಪ ಬಂದ ಕೂಡಲೇ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ಸಲ್ಲಿಸಿದ್ದರು. ನಂತರ ಆರೋಪದಿಂದ ಮುಕ್ತರಾದ ಮೇಲೆ ಮತ್ತೆ ಸಚಿವರಾಗಿದ್ದರು. ಅದೇ ರೀತಿಯಲ್ಲಿ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆಯನ್ನು ಪಡೆದುಕೊಳ್ಳಬೇಕೆಂದು ಆಗ್ರಹಿಸಿದರು.
ಇದನ್ನೂಓದಿ:ಈಶ್ವರಪ್ಪ ರಾಕ್ಷಸ ಪ್ರವೃತ್ತಿ ಮನುಷ್ಯ.. 40% ಕಮೀಷನ್ ಪಡೆಯೋ ಬಿಜೆಪಿಯವ್ರು ರಾಕ್ಷಸ್ರೋ, ಮನುಷ್ಯರೋ.. ಸಿದ್ದರಾಮಯ್ಯ