ಕರ್ನಾಟಕ

karnataka

ETV Bharat / state

ಗಲಭೆ ಪ್ರಕರಣದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆಯಾಗಲಿ: ಜಮೀರ್ ಅಹ್ಮದ್​ - ಬೆಂಗಳೂರು ಗಲಭೆ ಪ್ರಕರಣ

ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್​ ಖಾನ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

Zamir Ahmed
ಜಮೀರ್ ಅಹ್ಮದ್​

By

Published : Aug 13, 2020, 11:59 AM IST

ಬೆಂಗಳೂರು:ಕಾವಲ್ ಬೈರಸಂದ್ರ ಗಲಭೆ ಪ್ರಕರಣದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್​ ಖಾನ್ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ ಎಂದಿದ್ದಾರೆ.

ಕಣ್ಣೀರು ಬಂತು...

ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ. ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು. ಆದರೆ ಬಲಿಯಾದವರು ಇನ್ಯಾರೋ ಎಂದು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದು ಮನವಿ ಮಾಡುತ್ತೇನೆ ಎಂದು ಅವರು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details