ಬೆಂಗಳೂರು: ಅತೃಪ್ತ ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ ವಿಚಾರದ ಕುರಿತು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ವರದಿ ಸಲ್ಲಿಕೆ ಮಾಡಿದ್ದಾರೆ.
ಖುದ್ದಾಗಿ ಸ್ಪೀಕರ್ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಕೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಅತೃಪ್ತ ಶಾಸಕರು ಮಂಬೈನಿಂದ ವಿಶೇಷ ವಿಮಾನದ ಮೂಲಕ ನಗರದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಮಿನಿ ಬಸ್ ಮೂಲಕ ವಿಧಾನಸೌಧಕ್ಕೆ ಬಂದು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದರು. ಸುಪ್ರೀಂಕೋರ್ಟ್ ನೀಡಿದ್ದ ಗಡುವಿಗಿಂತ 10 ನಿಮಿಷ ತಡವಾಗಿ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ವಿಧಾನಸೌಧಕ್ಕೆ ಬರಲು ಶಾಸಕರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.