ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ 11 ಜನ ಸೋಂಕಿತರು ರಿಲ್ಯಾಕ್ಸ್​... ಆಸ್ಪತ್ರೆಯಿಂದ ಡಿಸ್ಚಾರ್ಜ್ - ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆ

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿದೆ. 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

11 infected people release by the hospital at Belgavi
ಬೆಳಗಾವಿಯಲ್ಲಿ 11 ಜನ ಸೋಂಕಿತರು ರಿಲ್ಯಾಕ್ಸ್​..

By

Published : May 4, 2020, 5:39 PM IST

ಬೆಳಗಾವಿ:ಕೋವಿಡ್-19 ಸೋಂಕು ತಗುಲಿದ್ದ ಒಬ್ಬ ಮಹಿಳೆ ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ನಗರ ಕ್ಯಾಂಪ್ ಪ್ರದೇಶದ 4 ಜನರು, ರಾಯಬಾಗ ತಾಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯ ಕ್ಯಾಂಪ್ ಪ್ರದೇಶದ ಪಿ- 355, ಪಿ-356, ಪಿ-358, ಪಿ-359. ಹಾಗೂ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಪಿ-296, ಪಿ-297, ಪಿ-299, ಪಿ-301, ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಪಿ-293, ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪಿ-295 ಹಾಗೂ ಹಿರೇಬಾಗೇವಾಡಿ ಗ್ರಾಮದ ಪಿ-193 ಗುಣಮುಖರಾಗಿದ್ದು ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿದೆ. 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

ABOUT THE AUTHOR

...view details