ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮುಂದುವರೆಸಿದ್ದು, ಇಂದು 12 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಬೆಳಗಾವಿಯಲ್ಲಿ ಇಂದೂ 12 ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 223 ಕ್ಕೆ ಏರಿಕೆ!
ಬೆಳಗಾವಿ ಜಿಲ್ಲಾಡಳಿತವು ಜಿಲ್ಲೆಯ ಇಂದಿನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಈ ಪ್ರಕಾರ 12 ಕೇಸ್ಗಳು ಪತ್ತೆಯಾಗಿವೆ.
ರಾಣಿ ಚನ್ನಮ್ಮ ವೃತ್ತ
ಆದರೆ, ರಾಜ್ಯ ಬುಲೆಟಿನಲ್ಲಿ ಬೆಳಗಾವಿಯ ಜಿಲ್ಲೆಯಲ್ಲಿ ಸೋಂಕು ಪತ್ತೆಯಾಗಿರುವುದನ್ನು ಉಲ್ಲೇಖಿಸಿಲ್ಲ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳ 12 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 223ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 97 ಆ್ಯಕ್ಟಿವ್ ಕೊರೊನಾ ಕೇಸ್ಗಳಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.