ಚಿಕ್ಕೋಡಿ: ರೈಲು ಹಳಿಯಲ್ಲಿ ಹೋಗುತ್ತಿದ್ದ ಕುರಿಗಳ ಮೇಲೆ ರೈಲು ಹರಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ರೈಲು ನಿಲ್ದಾಣದ ಹೊರವಲಯದಲ್ಲಿರುವ ರೈಲ್ವೆ ಗೇಟ್ ಬಳಿ ಅವಘಡ ಸಂಭವಿಸಿದೆ. ಚಿಂಚಲಿ ಪಟ್ಟಣದ ವಸಂತ ಜಾವೇದಾರ್ ಎಂಬುವವರಿಗೆ ಸೇರಿದ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.