ಚಿಕ್ಕೋಡಿ: ಜಿಲ್ಲೆಯಲ್ಲಿ ಇಂದು ನಡೆದ ಎಸ್ಎಸ್ಎಲ್‌ಸಿ ಸಮಾಜ ವಿಜ್ಞಾನ ಪರೀಕ್ಷೆಗೆ 40,460 ವಿದ್ಯಾರ್ಥಿಗಳ ಪೈಕಿ 38,669 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1,791 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 1,791 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು - ಚಿಕ್ಕೋಡಿ ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು ಸುದ್ದಿ
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರದ ಮಾರ್ಗಸೂಚಿಯನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸುತ್ತಿದೆ.
![ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 1,791 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು 1,791 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು](https://etvbharatimages.akamaized.net/etvbharat/prod-images/768-512-7845321-285-7845321-1593592801387.jpg)
1,791 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು
ಶೈಕ್ಷಣಿಕ ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಮಾರ್ಗಸೂಚಿಯನ್ನು ಚಾಚು ತಪ್ಪದೇ ಪಾಲಿಸುವ ಮೂಲಕ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸುತ್ತಿದೆ.
1,791 ವಿದ್ಯಾರ್ಥಿಗಳು ಸಮಾಜ ವಿಜ್ಞಾನ ಪರೀಕ್ಷೆಗೆ ಗೈರು
ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಂಟು ವಲಯಗಳಿದ್ದು ಅಥಣಿ - 161, ಕಾಗವಾಡ - 52, ಚಿಕ್ಕೋಡಿ - 376, ನಿಪ್ಪಾಣಿ - 129, ಗೋಕಾಕ್-122, ಮೂಡಲಗಿ - 255, ಹುಕ್ಕೇರಿ - 197, ರಾಯಬಾಗ - 499 ಹೀಗೆ ಒಟ್ಟು 1,791 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕಂಟೇನ್ಮೆಂಟ್ ಪ್ರದೇಶಗಳಿಂದ ಬಂದು ಪರೀಕ್ಷೆ ಬರೆದ ವಿದ್ಯಾರ್ಥಿಗಳು 22, ಹಾಗೂ ಮಹಾರಾಷ್ಟ್ರದಿಂದ 51 ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು.