ಬೆಳಗಾವಿ:ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 19 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಗಳ ಮೇಲೆ ಅತ್ಯಾಚಾರ ಮಾಡಿ, ಬಳಿಕ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ಯುವತಿ ಅನುಮಾನಾಸ್ಪದವಾಗಿ ಮೃತಳಾಗಿದ್ದಾಳೆ. ಕಳೆದ ಒಂದು ತಿಂಗಳ ಹಿಂದೆ ಬೆಂಗಳೂರಿಗೆ ತೆರಳಿದ್ದ ಯುವತಿ ಕಾಲ್ ಸೆಂಟರ್ನಲ್ಲಿ ಕೆಲಸಕ್ಕೆ ಸೇರಿದ್ದಳು. ಆದರೆ, ಏಕಾಏಕಿ ನಿನ್ನೆ ಯುವತಿ ಅಪರಿಚಿತ ಯುವಕ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.
ಆಸ್ಪತ್ರೆಗೆ ದಾಖಲಿಸಿದ ಯುವಕ ಬಳಿಕ ಯುವತಿಯ ಮೊಬೈಲ್‌ನೊಂದಿಗೆ ಎಸ್ಕೇಪ್ ಆಗಿದ್ದಾನೆ. ನಂತರ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ ವೇಳೆ ಯುವತಿ ನಿತ್ರಾಣಳಾಗಿದ್ದಳು. ತದನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.