ಬೆಳಗಾವಿ:ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಇಬ್ಬರು ಮೃತಪಟ್ಟಿದ್ದು, 11 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಳಗಾವಿ; ಕೊರೊನಾ ಸೋಂಕಿಗೆ ಇಬ್ಬರು ಬಲಿ.. 11 ಜನರಿಗೆ ಸೋಂಕು ದೃಢ - Belgavi corona news
ಬೆಳಗಾವಿ ನಗರದ 42 ವರ್ಷದ ವ್ಯಕ್ತಿ, ಕುಡಚಿ ಪಟ್ಟಣದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
Belgavi corona case
ಬೆಳಗಾವಿ ನಗರದ 42 ವರ್ಷದ ವ್ಯಕ್ತಿ ಕುಡಚಿ ಪಟ್ಟಣದ ವೃದ್ಧ ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿಂದು ಹೊಸದಾಗಿ 11 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 394ಕ್ಕೆ ಏರಿಕೆಯಾಗಿದೆ.
ಇಂದು ಬೆಳಗಾವಿ ನಗರದ 3, ಅಥಣಿ 5, ರಾಯಬಾಗ, ಸವದತ್ತಿಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ.