ಬೆಳಗಾವಿ:ಆರು ವರ್ಷದ ಬಾಲಕಿ ಸೇರಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 311ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಮರಳಿದ್ದ 21 ವರ್ಷದ ಯುವತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈಕೆ ವಡಗಾವಿ ನಿವಾಸಿ ಎನ್ನಲಾಗುತ್ತಿದೆ. ಮಹಾರಾಷ್ಟ್ರದಿಂದ ಆಗಮಿಸಿದ್ದ ಯುವತಿಯನ್ನು ಕ್ವಾರಂಟೈನ್ ಮಾಡಲಾಗಿತ್ತು, ಸದ್ಯ ಸೋಂಕು ತಗುಲಿರುವುದು ದೃಢಪಟ್ಟಿದೆ.
P-5385 ಸೋಂಕಿತರ ಸಂಪರ್ಕ ಹೊಂದಿದ್ದ 6 ವರ್ಷದ ಬಾಲಕಿಗೂ ಕೊರೊನಾ ಸೋಂಕು ತಗುಲಿದೆ. ಸವದತ್ತಿ ಪಟ್ಟಣದ ಬಾಲಕಿಗೆ ಮುಂಬೈನಿಂದ ಮರಳಿದ್ದ ವ್ಯಕ್ತಿಯಿಂದ ಸೋಂಕು ತಗುಲಿದೆ ಎನ್ನಲಾಗುತ್ತಿದೆ.
ಇಬ್ಬರನ್ನೂ ಜಿಲ್ಲಾಡಳಿತ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿದೆ. ಇನ್ನೂ ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ ಓರ್ವ ವೃದ್ಧೆ ಮೃತಪಟ್ಟಿದ್ದು, 282 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯ ಕೋವಿಡ್ ವಾರ್ಡ್ ನಲ್ಲಿ 28 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.