ಕರ್ನಾಟಕ

karnataka

ETV Bharat / state

ಮುಂದಿನ 10 ದಿನಗಳಲ್ಲಿ ದೇಶಾದ್ಯಂತ 2600 ರೈಲುಗಳ ಸಂಚಾರ: ಸಚಿವ ಸುರೇಶ್​ ಅಂಗಡಿ - ಸಚಿವ ಸುರೇಶ್​ ಅಂಗಡಿ

ಮುಂದಿನ ಹತ್ತು ದಿನಗಳಲ್ಲಿ ದೇಶಾದ್ಯಂತ 2600 ರೈಲುಗಳು ಸಂಚರಿಸಲಿವೆ. ಮುಂದಿನ ಹತ್ತು ದಿನಗಳಲ್ಲಿ ಇದರ ಲಾಭ ಪಡೆದು ಎಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ತೆರಳಬೇಕು ಎಂದು ಕೇಂದ್ರ ರೈಲ್ವೆ ಇಲಾಖೆ ‌ರಾಜ್ಯ ಸಚಿವ ಸುರೇಶ್​ ಅಂಗಡಿ ತಿಳಿಸಿದರು.

Suresh  Angadi
ಸುರೇಶ್​ ಅಂಗಡಿ

By

Published : May 24, 2020, 2:57 PM IST

ಬೆಳಗಾವಿ:ಮುಂದಿನ ಹತ್ತು ದಿನಗಳಲ್ಲಿ ದೇಶಾದ್ಯಂತ 2600 ರೈಲುಗಳು ಸಂಚರಿಸಲಿವೆ ಎಂದು ಕೇಂದ್ರ ರೈಲ್ವೆ ಇಲಾಖೆ ‌ರಾಜ್ಯ ಸಚಿವ ಸುರೇಶ್​ ಅಂಗಡಿ ತಿಳಿಸಿದರು.

ಕೇಂದ್ರ ರೈಲ್ವೆ ಇಲಾಖೆ ‌ರಾಜ್ಯ ಸಚಿವ ಸುರೇಶ್​ ಅಂಗಡಿ

ನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ದಿನಗಳಲ್ಲಿ 36 ಲಕ್ಷ ಶ್ರಮಿಕರನ್ನು ಅವರವರ ಸ್ಥಳಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಬೇಕಿದೆ. ಈಗಾಗಲೇ 31 ಲಕ್ಷ ಶ್ರಮಿಕರನ್ನು ಅವರವರ ಊರುಗಳಿಗೆ ಕಳುಹಿಸಿ ಕೊಡಲಾಗಿದೆ. ರಾಜ್ಯಗಳು ಸಹಕಾರ ಕೇಳಿದ್ರೆ, ಸಮ್ಮತಿಸಿದ್ರೆ ಆಯಾ ರಾಜ್ಯದೊಳಗೆ ರೈಲುಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು.

ಮುಂದಿನ ಹತ್ತು ದಿನಗಳಲ್ಲಿ ಇದರ ಲಾಭ ಪಡೆದು ಎಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ತೆರಳಬೇಕು. ಈಗಾಗಲೇ ಬೆಂಗಳೂರು- ಬೆಳಗಾವಿ, ಬೆಂಗಳೂರು -ಮೈಸೂರು ರೈಲುಗಳ ಸಂಚಾರ ಆರಂಭಿಸಲಾಗಿದೆ. ಜೂನ್ ಒಂದರಿಂದ ಮತ್ತಷ್ಟು ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಿದ್ದೇವೆ ಎಂದರು.

ಇಂದು ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಯಶಸ್ವಿಯಾಗಿದೆ. ಕೊರೊನಾ ವಿರುದ್ಧ ಹೋರಾಡಲು ನಾವೆಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದನ್ನು ಪಾಲನೆ ಮಾಡಿದರೆ ಕೊರೊನಾ ವಿರುದ್ಧ ಜಯ ಸಾಧ್ಯವಾಗುತ್ತೆ. ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿಎಸ್‌ವೈ, ಮಾಧ್ಯಮಗಳ ಸಲಹೆ ಪಾಲಿಸಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details