ಬೆಳಗಾವಿ:ಮದುವೆ ನಿಶ್ಚಿತಾರ್ಥಕ್ಕೆ ಹೊರಟ ಟೆಂಪೋ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಒಂದೇ ಕುಟುಂಬದ 28 ಪ್ರಯಾಣಿಕರು ಗಾಯಗೊಂಡ ಘಟನೆಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡವರೆಲ್ಲ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಒಂದೇ ಕುಟುಂಬದವರು. ಗರ್ಲಗುಂಜಿ ಗ್ರಾಮದಲ್ಲಿ ನಿಗದಿಯಾಗಿದ್ದ ಮದುವೆ ನಿಶ್ಚಿತಾರ್ಥದಲ್ಲಿ ಭಾಗವಹಿಸಲು ಬರುತ್ತಿದ್ದ ವೇಳೆ ಅವಘಡ ನಡೆದಿದೆ.