ಬೆಳಗಾವಿ:ಜಿಲ್ಲೆಯಲ್ಲಿ ಇಂದು ಹೊಸದಾಗಿ 289 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಐವರು ಬಲಿಯಾಗಿದ್ದಾರೆ.
ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಕುಂದಾನಗರಿಯಲ್ಲಿ 289 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,835ಕ್ಕೆ ಏರಿಕೆಯಾಗಿದೆ.