ಕರ್ನಾಟಕ

karnataka

ETV Bharat / state

ಉಮೇಶ ಕತ್ತಿ ನಿಧನ ಹಿನ್ನೆಲೆ 3 ದಿನ ರಾಜ್ಯಾದ್ಯಂತ ಶೋಕಾಚರಣೆ: ಸಿಎಂ ಬೊಮ್ಮಾಯಿ - ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ

ಸಚಿವ ಉಮೇಶ ಕತ್ತಿ ನಿಧನರಾದ ಹಿನ್ನೆಲೆಯಲ್ಲಿ 3 ದಿನ ರಾಜ್ಯಾದ್ಯಂತ ಶೋಕಾಚರಣೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮ 11ಕ್ಕೆ ಮುಂದೂಡಿಕೆ. ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

By

Published : Sep 7, 2022, 4:08 PM IST

Updated : Sep 7, 2022, 4:20 PM IST

ಬೆಳಗಾವಿ:ಸಚಿವ ಉಮೇಶ ಕತ್ತಿ ವಿಧಿವಶರಾದ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಇವತ್ತು ಅತ್ಯಂತ ಭಾರವಾದ ಹೃದಯದಿಂದ ನಾನು ಬೆಳಗಾವಿಗೆ ಬಂದಿದ್ದೇನೆ. ಉಮೇಶ ಕತ್ತಿ ಅವರ ಅಂತ್ಯಕ್ರಿಯೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು.

ಉಮೇಶ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಜನರು ದೊಡ್ಡ ಪ್ರಮಾಣದಲ್ಲಿ ಬರೋದ ಬೇಡ, ಜನರು ಸಹಕರಿಸಬೇಕು. ರಾಜ್ಯಾದ್ಯಂತ ಮೂರು ದಿನ ಸರ್ಕಾರದಿಂದ ಶೋಕಾಚರಣೆ ಮಾಡಲು ತೀರ್ಮಾನಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮವನ್ನು ಸೆ. 11ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಸಿಎಂ ಬೊಮ್ಮಾಯಿ

ಸಿಎಂ ಪ್ರವಾಸ ರದ್ದು: ಬಾಗಲಕೋಟೆ, ವಿಜಯಪುರ, ಧಾರವಾಡ, ಬಳ್ಳಾರಿ ಜಿಲ್ಲೆಗಳ ಸೆ.9 ರ ಸಿಎಂ ಪ್ರವಾಸ ರದ್ದು ಮಾಡಲಾಗಿದೆ.

(ಇದನ್ನೂ ಓದಿ: ಉಮೇಶ್ ಕತ್ತಿ ಅವರ ರಾಜಕೀಯ ಜೀವನ ಸ್ಮರಿಸುವ ಫೋಟೋಗಳು)

Last Updated : Sep 7, 2022, 4:20 PM IST

ABOUT THE AUTHOR

...view details