ಬೆಳಗಾವಿ:ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಜಿಲ್ಲೆಯ 334 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6958ಕ್ಕೆ ಏರಿಕೆಯಾಗಿದೆ. ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 178 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಳಗಾವಿಯಲ್ಲಿಂದು 334 ಜನರಲ್ಲಿ ಕೊರೊನಾ: 178 ಸೋಂಕಿತರು ಗುಣಮುಖ - Corona case in Belagavi
ಗಡಿ ಜಿಲ್ಲೆ ಬೆಳಗಾವಿಯಲ್ಲಿ 334 ಜನರಿಗೆ ಸೋಂಕು ತಗುಲಿದೆ. ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 178 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಿಂದ ಈವರೆಗೆ 3063 ಸೋಂಕಿತರು ಗುಣಮುಖರಾಗಿದ್ದು, ಸದ್ಯ 3782 ಸಕ್ರಿಯ ಪ್ರಕರಣಗಳಿವೆ. ಕೋವಿಡ್ಗೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 113 ಮಂದಿ ಬಲಿಯಾಗಿದ್ದಾರೆ.