ಬೆಳಗಾವಿ:ಬೆಳಗಾವಿ ಜಿಲ್ಲೆಯಲ್ಲಿ ಇಂದು 379 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,739ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ 379 ಜನರಿಗೆ ಕೊರೊನಾ ಸೋಂಕು ದೃಢ - ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು 379 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
Belagavi
ಇಂದು ಸೋಂಕಿಗೆ 3 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 267 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3,717 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ವಾರ್ಡ್ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.