ಕರ್ನಾಟಕ

karnataka

By

Published : Nov 29, 2019, 9:08 AM IST

ETV Bharat / state

ಮುಂಬೈ - ಪುಣೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ... ನಾಲ್ವರ ದುರ್ಮರಣ

ಮುಂಬೈ - ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಈ ಭೀಕರ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

pune
ಭೀಕರ ರಸ್ತೆ ಅಪಘಾತ

ರಾಯಗಢ ( ಮಹಾರಾಷ್ಟ್ರ):ರಾಯಗಢದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಅಸುನೀಗಿದ್ದಾರೆ. ಮುಂಬೈ - ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಈ ಭೀಕರ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೀಕರ ರಸ್ತೆ ಅಪಘಾತ

ಈವರೆಗೆ ದೊರೆತಿರುವ ಮಾಹಿತಿ ಪ್ರಕಾರ ಬೆಳಗಿನ ಜಾವ 1: 30ರ ಸುಮಾರಿಗೆ ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕಾರು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ 6 ಜನರಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪನ್ವೆಲ್​ನ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಭೀಕರ ರಸ್ತೆ ಅಪಘಾತ

ಪ್ರಯಾಣಿಕರು ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಸತಾರಾದಿಂದ ಹಿಂದಿರುಗುತ್ತಿದ್ದರು. ಆದರೆ, ಕಾರು ಕೆಮಿಸ್ಟ್ ಪೊಲೀಸ್ ಠಾಣೆ ಸಮೀಪಿಸುತ್ತಿದ್ದಂತೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸಂದರ್ಭದಲ್ಲಿ ಕಾರಿನ ಮುಂಭಾಗ ಟ್ಯಾಂಕರ್‌ಗೆ ಸಂಪೂರ್ಣವಾಗಿ ಅಪ್ಪಳಿಸಿದೆ.

ಮೃತರಲ್ಲಿ 3 ಮಹಿಳೆಯರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಭೀಕರ ರಸ್ತೆ ಅಪಘಾತ

For All Latest Updates

TAGGED:

ABOUT THE AUTHOR

...view details