ಬೆಳಗಾವಿ/ಬಳ್ಳಾರಿ:ಬೆಳಗಾವಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಸಿಡಿಲು ಬಡಿದು ತಲಾ ಎರಡು ಮಹಿಳೆಯರು ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕ ಉಳ್ಳಿಗೇರಿ ಗ್ರಾಮದಲ್ಲಿ ಕೂಲಿ ಕೆಲಸಕ್ಕೆ ಎಂದು ಹೊಲಕ್ಕೆ ತೆರಳಿದ್ದ ಸಂದರ್ಭದಲ್ಲಿ ಗುಡುಗು ಸಹಿತ ಮಳೆಯಾದ ಹಿನ್ನೆಲೆ ಮರದ ಕೆಳಗೆ ಆಶ್ರಯ ಪಡೆದುಕೊಂಡಿದ್ದ ಇಬ್ಬರು ಮಹಿಳೆಯರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ಯಲ್ಲವ್ವ ಇಂಚಲ ಹಾಗೂ ಭಾಗವ್ವ ಹೊಸಮನಿ ಮೃತ ದುರ್ದೈವಿಗಳು.
ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆ ನಾಲ್ಕೈದು ಜನರು ಆಶ್ರಯ ಪಡೆಯಲು ಮರದ ಕೆಳಗೆ ನಿಂತುಕೊಂಡಿದ್ದರು. ಈ ವೇಳೆ, ಸಿಡಿಲು ಬಡಿದು ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯರು ಸವದತ್ತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.