ಬೆಳಗಾವಿ:ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆ ದಂಡ ವಿಧಿಸುತ್ತಿದ್ದು, ಇಲ್ಲಿಯವರೆಗೆ 43,400 ರೂಪಾಯಿ ದಂಡ ಸಂಗ್ರಹವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗಿದೆ.
ಮಾಸ್ಕ್ ಧರಿಸದವರಿಂದ 43 ಸಾವಿರ ರೂ ದಂಡ ಸಂಗ್ರಹ: ಪಾಲಿಕೆ ಆಯುಕ್ತ ಜಗದೀಶ್ - ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಪ್ರತಿಕ್ರಿಯೆ
ಸಮಾಜದ ಆರೋಗ್ಯದ ದೃಷ್ಟಿಯಿಂದ ಸಾರ್ವಜನಿಕರು ಹೊರಗಡೆ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.
ಪಾಲಿಕೆ ಆಯುಕ್ತ ಜಗದೀಶ್
ಜಿಲ್ಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಲಿಸಲಾಗಿದ್ದು, ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ.