ಬೆಳಗಾವಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 454 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 13470 ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ 454 ಜನರಿಗೆ ಕೊರೊನಾ
ಬೆಳಗಾವಿಯಲ್ಲಿ ಇಂದು 454 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 13470ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 245 ಸೋಂಕಿತರು ಗುಣಮುಖರಾಗಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆ
ಬೆಳಗಾವಿ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 245 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 9388 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 3885 ಸಕ್ರೀಯ ಪ್ರಕರಣಗಳಿವೆ. ಕಿಲ್ಲರ್ ಕೊರೊನಾಗೆ ಬೆಳಗಾವಿಯಲ್ಲಿ ಈವರೆಗೆ 197 ಜನ ಬಲಿಯಾಗಿದ್ದಾರೆ.