ಕರ್ನಾಟಕ

karnataka

ETV Bharat / state

ಚಿಕ್ಕೋಡಿ : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ 462 ವಿದ್ಯಾರ್ಥಿಗಳು ಗೈರು - Chikkodi sslc exam latest news 2021

ಪ್ರತಿ ಕೊಠಡಿಗೆ 12 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗಿದೆ. 12 ಮಕ್ಕಳಿಗೆ ಒಂದರಂತೆ ಒಟ್ಟು 4012 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ ಒಟ್ಟು 221 ಪರೀಕ್ಷಾ ಕೇಂದ್ರಗಳಲ್ಲಿ 6932 ಸಿಬ್ಬಂದಿ ನೇಮಿಸಲಾಗಿದೆ..

sslc exams in chikkodi
ಚಿಕ್ಕೋಡಿಯಲ್ಲಿ ಎಸ್‌ಎಸ್ಎಲ್‌ಸಿ ಪರೀಕ್ಷೆ

By

Published : Jul 19, 2021, 3:42 PM IST

ಚಿಕ್ಕೋಡಿ :ಕೊರೊನಾ ಆತಂಕದ ನಡುವೆಯೇ ತಾಲೂಕಿನಲ್ಲಿ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆಗಳನ್ನು ಬರೆದಿದ್ದಾರೆ.

45049 ಮಕ್ಕಳ ಪೈಕಿ 44,584 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಸುಮಾರು 462 ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ತಿಳಿಸಿದ್ದಾರೆ.

ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು

ಪ್ರತಿ ಕೊಠಡಿಗೆ 12 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗಿದೆ. 12 ಮಕ್ಕಳಿಗೆ ಒಂದರಂತೆ ಒಟ್ಟು 4012 ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಹಾಗೂ
ಒಟ್ಟು 221 ಪರೀಕ್ಷಾ ಕೇಂದ್ರಗಳಲ್ಲಿ 6932 ಸಿಬ್ಬಂದಿ ನೇಮಿಸಲಾಗಿದೆ. ಕೊರೊನಾ ವ್ಯಾಕ್ಸಿನ್​ ಪಡೆದ ಶಿಕ್ಷಕರು ಹಾಗೂ ಸಿಬ್ಬಂದಿಗೆ ಮಾತ್ರ ಕರ್ತವ್ಯಕ್ಕೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಓದಿ:ವ್ಯಕ್ತಿಗತ ಗೌಪ್ಯತೆಗೆ ರಾಜ್ಯದಲ್ಲಿ ಭದ್ರತೆ ಎಲ್ಲಿದೆ?.. ಬಿಜೆಪಿ ರಾಜ್ಯಾಧ್ಯಕ್ಷರ ಪರ ಬ್ಯಾಟ್ ಬೀಸಿದ ಯತ್ನಾಳ!

ABOUT THE AUTHOR

...view details