ಬೆಳಗಾವಿ:ಬೆಳಗಾವಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13 ಸಾವಿರ ಗಡಿ ದಾಟಿದ್ದು, ಇಂದು ಒಂದೇ ದಿನ 470 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,016ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ 13 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ - Belagavi corona news
ಜಿಲ್ಲೆಯಲ್ಲಿ ಇಂದು 470 ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ.
Belagavi
ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಓರ್ವ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ 132 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಜಿಲ್ಲೆಯಲ್ಲಿ ಸದ್ಯ 3,676 ಸಕ್ರಿಯ ಪ್ರಕರಣಗಳಿವೆ.