ಬೆಳಗಾವಿ: ಮಹಾಮಾರಿ ಕೊರೊನಾ ಅಟ್ಟಹಾಸ ಗಡಿ ಜಿಲ್ಲೆಯಲ್ಲಿ ಮುಂದುವರೆದಿದ್ದು ಇಂದು ಒಂದೇ ದಿನ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಇದರಿಂದ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.
ಕಿಲ್ಲರ್ ಕೊರೊನಾಗೆ ಐವರು ಬಲಿ; ಬೆಳಗಾವಿಯಲ್ಲಿಂದು 217 ಮಂದಿಗೆ ಸೋಂಕು!
ಜಿಲ್ಲೆಯಲ್ಲಿಂದು ಒಂದೇ ದಿನ 5 ಮಂದಿ ಸೋಂಕಿಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಹಾಗೂ 217 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Belgavi corona case
ಗೋಕಾಕಿನ ಇಬ್ಬರು ಪುರುಷರು, ಅಥಣಿಯ ಓರ್ವ ಮಹಿಳೆ, ಚಿಕ್ಕೋಡಿ ಹಾಗೂ ಬೆಳಗಾವಿಯ ತಲಾ ಓರ್ವ ಪುರುಷರು ಚಿಕಿತ್ಸೆ ಫಲಿಸದ ಹಿನ್ನೆಲೆ ಕೋವಿಡ್ ವಾರ್ಡ್ ನಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು ಒಂದೇ ದಿನ 217 ಜನರಲ್ಲಿ ಕೊರೊನಾ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3230ಕ್ಕೇರಿಕೆಯಾಗಿದೆ ಹಾಗೂ 88 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 918 ಜನ ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್ ವಾರ್ಡ್ ನಲ್ಲಿ 2242 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.