ಬೆಳಗಾವಿ: ಕಿತ್ತೂರು ಸಂಸ್ಥಾನದ ಅಭಿವೃದ್ಧಿಗೆ ಈಗಾಗಲೇ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ನೀಡಲಾಗಿದೆ. ಒಟ್ಟು 200 ಕೋಟಿ ರೂ.ಗಳ ಯೋಜನೆ ರೂಪಿಸಲಾಗಿದೆ ಎಂದು ಕನ್ನಡ ಮತ್ತ ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಲೂಕಿನ ಶಾಸಕರ ಪ್ರಯತ್ನದಿಂದ ಕಿತ್ತೂರು ಕೋಟೆಯ ಸಮಗ್ರ ಅಭಿವೃದ್ಧಿಗೆ ಈಗಾಗಲೇ 50 ಕೋಟಿ ರೂ. ಅನುದಾನ ನೀಡಿಲಾಗಿದೆ. ಸ್ವಾತಂತ್ರ್ಯೋತ್ಸವದ ಕಿಚ್ಚು ಹಚ್ಚುವ ಮುಂಚೆ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ.