ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ಭಾಗದ ತಾಲೂಕಿನಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಕೆಳಹಂತದ 8 ಸೇತುವೆ ಪೈಕಿ 6 ಸೇತುವೆಗಳು ಮತ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಕೃಷ್ಣಾ ನದಿಗೆ 1ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ, ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ, ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಶಿ, ಮಲಿಕವಾಡ-ದತ್ತವಾಡ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಸೇತುವೆಗಳನ್ನು ಅವಲಂಬಿಸಿರುವ ಗ್ರಾಮಗಳ ಜನರಿಗೆ ಪರ್ಯಾಯ ಮಾರ್ಗಗಳು ಇರುವುದರಿಂದ ಜನರ ಪ್ರಯಾಣಕ್ಕೆ ಯಾವುದೇ ತೊಂದರೆ ಇಲ್ಲ. ಆದರೆ, ಹತ್ತಾರು ಕಿ.ಮೀ ಸುತ್ತುಬಳಸಿ ಪ್ರಯಾಣಿಸಬೇಕಾದ ಅನಿವಾರ್ಯ ಎದುರಾಗಿದೆ.